ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿಯ ಪ್ರಯುಕ್ತ ನಾಳೆ ಜೂನ್ 27 ರಂದು ಬೆಳ್ಳಿಗೆ 9:30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಮೆರವಣಿಗೆ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಬೆಳಿಗ್ಗೆ 11:00 ಘಂಟೆಗೆ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಿಕ್ಷಣ ಟ್ರಸ್ಟ್ (ರಿ).ನ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮಾನಂದನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ .ಕುಮಾರಸ್ವಾಮಿ ಅವರು ಕಾರ್ಯಕ್ರಮದ ಘನಉಪಸ್ಥಿತಿ ವಹಿಸಲಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕರÀರಾದ ಎ.ಬಿ ರಮೇಶ ಬಂಡಿಸಿದ್ದೇಗೌಡ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಹಾಗೂ ಮಳವಳ್ಳಿ ವಿಧಾನಸಭಾ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಮಂಡ್ಯ ವಿಧಾನಸಭಾ ಶಾಸಕರಾದ ಪಿ.ರವಿಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಕೆ. ವಿವೇಕಾನಂದ, ವಿಧಾನಸಭಾ ಶಾಸಕರುಗಳಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ, ನಗರಸಭೆ ಅಧ್ಯಕ್ಷ ಎಂ.ವಿಪ್ರಕಾಶ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ನಯೀಮ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ.ಅನ್ಬುಕುಮಾರ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಒಕ್ಕಲಿಗರ ಸಂಘದ ನಿರ್ದೇಶಕರುಗಳಾದ ಎಸ್.ಜೆ.ಅಶೋಕ್ ಜಯರಾಮು, ರಾಘವೇಂದ್ರ, ಚಂದ್ರಶೇಖರ್, ಎನ್. ಬಾಲಕೃಷ್ಣ ಆಗಮಸಲಿದ್ದು, ಬೆಂಗಳೂರು ವಿವೇಕಾನಂದ ಪದವಿ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ.ಬಿ. ಪಾಂಡುಕುಮಾರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.














