ಮೈಸೂರು: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿಶ್ವಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಗುಬ್ಬಚ್ಚಿ ಹಬ್ಬವನ್ನು ನಗರದ ಮಹಾರಾಜ ಮೈದಾನದ ಮುಂಭಾಗ ನಾಳೆ ಮಾರ್ಚ್ ೨೦ರಂದು ಬೆಳಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ.
ಬೇಬಿ ಮಠದ ಪೀಠಾಧ್ಯಕ್ಷರಾದ ಡಾ. ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿಗಳು, ವನ್ಯಜೀವಿ ಮಂಡಳಿಯ ರಾಜ್ಯ ಸದಸ್ಯರಾದ ಡಾ. ಸಂತೃಪ್ತಿ ಗೌಡ, ಕೆ.ಆರ್. ವಿಭಾಗದ ಉಪ ಪೊಲೀಸ್ ಆಯುಕ್ತರಾದ ರಮೇಶ್ ಕುಮಾರ್, ಉರಗ ತಜ್ಞ ಸ್ನೇಕ್ ಶ್ಯಾಮ್, ಚಿತ್ರನಟ ಆದಿ ಲೋಕೇಶ್, ಎನ್.ಎಂ. ನವೀನ್ ಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್‌ನ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ.