ಮನೆ ಸ್ಥಳೀಯ ನಾಳೆ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ನಾಳೆ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

0

ಮಂಡ್ಯ: ಧ್ವನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ 2025ರ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯನ್ನು ನಾಳೆ ಜೂನ್ 26 ರಂದು ಬೆಳಿಗ್ಗೆ 11:00 ಗಂಟೆಗೆ ಸಿಹಿನೀರು ಕೊಳದಲ್ಲಿನ ಆರ್.ಜಿ.ವ್ಯಸನಿಗಳ ಪುವಶ್ವೇತನಾ ಕೇಂದ್ರಾದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷರಾದ ಎಂ.ವಿ.ಪ್ರಕಾಶ್ ವಹಿಸಲಿದ್ದಾರೆ. ವಿಕಲಚೇತನರ ಮತ್ತು ಹಿರಿಯ ನಾಗರೀಕರ ಕಲ್ಯಾಣಾಧಿಕಾರಿಗಳಾದ ಎಸ್.ಎಸ್. ಕೋಮಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಗರಸಭಾ ಸದಸ್ಯೆ ಎಂ.ಎಸ್. ಪೂರ್ಣಿಮ ರವಿ ಆಗಮಿಸಲಿದ್ದು, ಆದಿಚುಂಚನಗಿರಿ ವೈದ್ಯಕೀಯ ಮಹಾವಿಶ್ವವಿದ್ಯಾಲಯದ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಧ್ಯಾಪಕರಾದ ಡಾ. ವಿಜಯ್ ಎಸ್. ಹೂಗಾರ್ ಅವರು ಮಧ್ಯಪಾನದಿಂದಾಗುವ ದುಷ್ಪರಿಣಾಮ ಕುರಿತು ಉಪನ್ಯಾಸ ನೀಡಲಿದ್ದಾರೆ. ಪ್ರಾಸ್ತಾವಿಕ ನುಡಿಯನ್ನು ಡಿ. ತೇಜಕುಮಾರಿ ಮಾಡಲಿದ್ದಾರೆ.