ಮೈಸೂರು: ತಾಮರ ಹೆಲ್ತ್ ಕೇರ್’ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಮಮತಾಳ ಶವ ಪರೀಕ್ಷೆಯು ನಾಳೆ ಬೆಳಗ್ಗೆ ಸರ್ಕಾರಿ ಅಧಿಕಾರಿಗಳು, ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಲಿದೆ.
ಕೊಳ್ಳೇಗಾಲ ತಾಲ್ಲೂಕಿನ ಉಪವಿಭಾಗಾಧಿಕಾರಿಗಳು, ಯಳಂದೂರು ವಿಭಾಗದ ತಹಶೀಲ್ದಾರರು, ಪೊಲೀಸ್ ಇನ್ಸ್’ಪೆಕ್ಟರ್ ಶ್ರೀಕಾಂತ್, ಪೊಲೀಸ್ ಸಬ್ ಇನ್ಸ್’ಪೆಕ್ಟರ್ ನಂದೀಶ್, ಅಂಬಳೆ ಗ್ರಾಮ ಪಂಚಾಯಿತಿಯ ಪಿಡಿಓ ಮಮತಾ ಹಾಗೂ ಗ್ರಾಮಸ್ಥರ ಸಮಕ್ಷಮದಲ್ಲಿ ಚಾಮರಾಜನಗರ ಮೆಡಿಕಲ್ ಕಾಲೇಜಿನ ಡೀನ್ ಅಂಡ್ ಡೈರೆಕ್ಟರ್ ಮಂಜುನಾಥ್ ಅವರ ನೇತೃತ್ವದಲ್ಲಿ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಮಹೇಶ್, ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ.ಮಹೇಶ್ ಮತ್ತು ಅವರ ಸಿಬ್ಬಂದಿಗಳು ಕುಟುಂಬಸ್ಥರ ಉಪಸ್ಥಿತಿಯಲ್ಲಿ ಸಮಾಧಿಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯನ್ನು ನಡೆಸಲಿದ್ದಾರೆ.
ಈಗಲಾದರೂ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳು ತಾಮರ ಹೆಲ್ತ್ ಕೇರ್ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಇನ್ನಷ್ಟು ಸಾವು ನೋವುಗಳು ಉಂಟಾಗದಂತೆ ಎಚ್ಚರವಹಿಸಬೇಕೆಂದು ಪ್ರಕರಣವನ್ನು ಬಯಲಿಗೆಳೆದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷರಾದ ಸುಶೀಲ, ಪ್ರಧಾನ ಕಾರ್ಯದರ್ಶಿಗಳಾದ ಎಂ ಪುಟ್ಟರಾಜು, ಜಿಲ್ಲಾಧ್ಯಕ್ಷರಾದ ವಿನೋದ್ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.