ಮನೆ ರಾಷ್ಟ್ರೀಯ ನಿರ್ಮಾಣ ಹಂತದ ಸುರಂಗದ ಮೇಲ್ಭಾಗ ಕುಸಿತ: ಆರು ಕಾರ್ಮಿಕರು ಸಿಲುಕಿರುವ ಶಂಕೆ

ನಿರ್ಮಾಣ ಹಂತದ ಸುರಂಗದ ಮೇಲ್ಭಾಗ ಕುಸಿತ: ಆರು ಕಾರ್ಮಿಕರು ಸಿಲುಕಿರುವ ಶಂಕೆ

0

ಹೈದರಾಬಾದ್: ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ನಿರ್ಮಾಣ ಹಂತದ ಸುರಂಗದ ಮೇಲ್ಭಾಗ ಕುಸಿದಿದ್ದು, ಕನಿಷ್ಠ ಆರು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Our Whatsapp Group

ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ ಆರರಿಂದ ಎಂಟು ಕಾರ್ಮಿಕರು ಸುರಂಗದೊಳಗೆ ಸಿಲುಕಿರುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಾರ್ಮಿಕರು ಕೆಲಸದ ನಿಮಿತ್ತ ಸುರಂಗದೊಳಗೆ ಹೋಗಿದ್ದಾಗ 12ರಿಂದ 13 ಕಿ.ಮೀ ಅಂತರದಲ್ಲಿ ಸುರಂಗದ ಮೇಲ್ಭಾಗ ಕುಸಿದಿದೆ ಎಂದು ಅವರು ಹೇಳಿದ್ದಾರೆ.

ಘಟನೆ ಸಂಬಂಧ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇತರ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯ ನೀರಾವರಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ, ನೀರಾವರಿ ಸಲಹೆಗಾರ ಆದಿತ್ಯನಾಥ ದಾಸ್ ಮತ್ತು ಇತರ ಅಧಿಕಾರಿಗಳು ವಿಶೇಷ ಹೆಲಿಕಾಪ್ಟರ್‌ನಲ್ಲಿ ಧಾವಿಸಿದ್ದಾರೆ ಎಂದು ತಿಳಿದುಬಂದಿದೆ.