ಮನೆ ರಾಜ್ಯ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

0

ಚಾಮರಾಜನಗರ(Chamarajanagara): ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ಮುಂಜಾನೆ ಧಾರಾಕಾರ ಮಳೆಯಾಗಿದ್ದು, ಚರಂಡಿಗಳ ಕೊಳಚೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ.

ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಜಿಲ್ಲಾಡಳಿತ ಭವನದ ಗೇಟ್ ಬಳಿ ಭಾರಿ ಪ್ರಮಾಣದಲ್ಲಿ ನೀರು ನಿಂತು ಜನರು ಸಂಚರಿಸಲು ಪರದಾಡಿದರು. ಜಿಲ್ಲಾಡಳಿತ ಭವನದ ಆವರಣವೂ ಜಲಾವೃತಗೊಂಡಿದೆ.

ತಡರಾತ್ರಿ 2.30ರ ಸುಮಾರಿಗೆ ಆರಂಭಗೊಂಡ ಮಳೆ ಮುಂಜಾನೆ 4 ಗಂಟೆಯ ಹೊತ್ತಿಗೆ ಬಿರುಸು ಪಡೆಯಿತು. ತಾಲ್ಲೂಕಿನ ವೆಂಕಟಯ್ಯನಛತ್ರದಲ್ಲಿ 7.3 ಸೆಂ.ಮೀ, ಕೊತ್ತಲವಾಡಿ ಗ್ರಾಮದ ವ್ಯಾಪ್ತಿಯಲ್ಲಿ 7.25 ಸೆಂ.ಮೀ, ದೊಡ್ಡಮೋಳೆಯಲ್ಲಿ 7.15 ಸೆಂ.ಮೀ, ಕೊತ್ತಲವಾಡಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.