ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಭಾಗದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರಾವಳಿ ವ್ಯಾಪ್ತಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಅಂದೇ ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಜುಲೈ 25ಕ್ಕೆ ಬೀದರ್, ಕಲಬುರಗಿ, ಯಾದಗರಿ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಬಳ್ಳಾರಿ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
Saval TV on YouTube