ಮನೆ ರಾಜ್ಯ ಕಾಫಿನಾಡಿಗೆ ಹರಿದು ಬಂದ ಪ್ರವಾಸಿಗರ ದಂಡು – ಸಾಲುಗಟ್ಟಿ ನಿಂತ ವಾಹನಗಳು

ಕಾಫಿನಾಡಿಗೆ ಹರಿದು ಬಂದ ಪ್ರವಾಸಿಗರ ದಂಡು – ಸಾಲುಗಟ್ಟಿ ನಿಂತ ವಾಹನಗಳು

0

ಚಿಕ್ಕಮಗಳೂರು : ಸಾಲು ಸಾಲು ರಜೆ ಹಿನ್ನೆಲೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಇದರಿಂದ ಮುಳ್ಳಯ್ಯನಗಿರಿ ಮಾರ್ಗದಲ್ಲಿ 4-5 ಕಿ.ಮೀ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.

ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಾಧಾರ ಭಾಗಕ್ಕೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಆಯುಧಪೂಜೆ, ವಿಜಯದಶಮಿ ಹಿನ್ನೆಲೆ ಸಾಲು ಸಾಲು ರಜೆಗಳಿದ್ದು, ಪ್ರವಾಸಿಗರು ಈ ಭಾಗದ ಪ್ರವಾಸಿ ತಾಣಗಳಿಗೆ ಬಂದಿದ್ದಾರೆ. ಗಿರಿ ಭಾಗಕ್ಕೆ ನಿತ್ಯ 1200 ವಾಹನಗಳಿಗೆ ಮಾತ್ರ ಅವಕಾಶವಿದೆ. ಬೆಳಗ್ಗೆ 600, ಮಧ್ಯಾಹ್ನ 600 ವಾಹನಗಳಿಗಷ್ಟೆ ಅವಕಾಶ ನೀಡಲಾಗುತ್ತದೆ.

ಈಗಾಗಲೇ ಗಿರಿ ಭಾಗಕ್ಕೆ ಸಾಕಷ್ಟು ವಾಹನಗಳು ತೆರಳಿದ್ದು, ಎನ್.ಎಂ.ಡಿ.ಸಿ.ಯಿಂದ ಕೈಮರ ಚೆಕ್ ಪೋಸ್ಟ್‌ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ಮೇಲೆ ಹೋಗಿರುವ ವಾಹನಗಳು ಕೆಳಗಿಳಿದ ಮೇಲೆ ಬೇರೆ ವಾಹನಗಳಿಗೆ ಅವಕಾಶ ನೀಡಲಾಗುತ್ತದೆ.