ಮನೆ ಅಪರಾಧ ಟ್ರ್ಯಾಕ್ಟರ್-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಟ್ರ್ಯಾಕ್ಟರ್-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

0

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು,  ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಾಲೂರು ತಾಲೂಕು ಕೋಡಿಹಳ್ಳಿ-ಚೊಡಗೊಂಡನಹಳ್ಳಿ ರಸ್ತೆಯಲ್ಲಿ ಬುಧವಾರ ಮುಂಜಾನೆ ನಡೆದಿದೆ.


ದ್ವಿಚಕ್ರ ಸವಾರ ನಾಗೋಂಡಳ್ಳಿ ಉಮೇಶ್ (35 ವರ್ಷ) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.
ಇವರ ಜತೆಗೆ ಹಿಂಬದಿ ಸವಾರರಾಗಿದ್ದ ದೊಡ್ಡ ಕಲ್ಲಳ್ಳಿ ಗ್ರಾಮದ ಪ್ರವೀಣ್‌ ಗಾಯಗೊಂಡಿದ್ದು, ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಲೂರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ನಾಟಾ ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್‌ ಮತ್ತು ಬೈಕ್‌ ನಡುವೆ ಎದುರಾಬದುರು ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ.