ಭೋಪಾಲ್: ಟ್ರಾಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢದಲ್ಲಿ ಭಾನುವಾರ(ಜೂ.2 ರಂದು) ನಡೆದಿದೆ.
ಮದುವೆ ಮೆರವಣಿಗೆಯಲ್ಲಿ ಟ್ರ್ಯಾಕ್ಟರ್ ರಾಜಸ್ಥಾನದ ಮೋತಿಪುರದಿಂದ ಕುಲಂಪುರಕ್ಕೆ ಹೋಗುತ್ತಿದ್ದ ವೇಳೆ ರಾಜ್‌ಗಢ್‌ನ ಪಿಪ್ಲೋಡಿಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಪಲ್ಟಿಯಾಗಿದೆ. ಪರಿಣಾಮ 13 ಮಂದಿ ಮೃತಪಟ್ಟಿದ್ದು, 15 ಮಂದಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.
ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗಾಯಾಳುಗಳಿಗೆ ರಾಜ್‌ಗಢದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಚಿವ ನಾರಾಯಣ್ ಸಿಂಗ್ ಪನ್ವಾರ್ ಭೇಟಿ ನೀಡಿದ್ದಾರೆ.
Saval TV on YouTube