ಭಾರತೀಯ ನೌಕಾ ಪಡೆ 112 ಟ್ರೇಡ್ಸ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಂಡಮಾನ್ ಮತ್ತು ನಿಕೋಬರ್ ಹೆಡ್ಕ್ವಾಟ್ರಸ್ನಿಂದ ಗ್ರೂಪ್ ಸಿಯ ನಾನ್ ಗೆಜೆಟೆಡ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು ಐಟಿಐ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 6 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಭಾರತೀಯ ನೌಕಾಪಡೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಟ ವಯಸ್ಸು 18 ವರ್ಷಗಳು ಗರಿಷ್ಠ ವಯಸ್ಸು 25 ವರ್ಷಗಳು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ವ ಅಭ್ಯರ್ಥಿಗಳು: 05 ವರ್ಷಗಳು
ಮಾಜಿ ಸೈನಿಕ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಸ್ಕ್ರೀನಿಂಗ್, ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06 ಆಗಸ್ಟ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 ಸೆಪ್ಟೆಂಬರ್ 2022
ಅಧಿಕೃತ ವೆಬ್‌ಸೈಟ್: joinindiannavy.gov.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
ಬಳಿಕ andaman.gov.in ಮತ್ತು ncs.gov.in ಲಿಂಕ್ ಗೆ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸುವ ಬಟನ್ ಕ್ಲಿಕ್ ಮಾಡಿ.