ಮನೆ ರಾಜ್ಯ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಮೈಲಿಗೆ ಸಂಪ್ರದಾಯ: ಮಗು, ಬಾಣಂತಿಯನ್ನು ಮನೆಗೆ ಸೇರಿಸಿದ ನ್ಯಾಯಧೀಶರು

ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಮೈಲಿಗೆ ಸಂಪ್ರದಾಯ: ಮಗು, ಬಾಣಂತಿಯನ್ನು ಮನೆಗೆ ಸೇರಿಸಿದ ನ್ಯಾಯಧೀಶರು

0

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕಾಡುಗೊಲ್ಲ ಸಮುದಾಯದ ಮೈಲಿಗೆ ಸಂಪ್ರದಾಯಕ್ಕೆ ಮಗು ಬಲಿ ಪಡೆದ ಬೆನ್ನಲ್ಲೇ ಮತ್ತೊಂದು ಮೈಲಿಗೆ ಸಂಪ್ರದಾಯ ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆ, ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಕಳೆದ ಕೆಲವು ದಿನಗಳಿಂದ ಊರಿಂದಾಚೆಗೆ ಪ್ರಾಣಿಗಳಿಗೂ ಯೋಗ್ಯವಲ್ಲದ ಚಿಕ್ಕ ಗುಡಿಸಲಿನಲ್ಲಿ ಮಗು ಬಾಣಂತಿಯನ್ನು ಇರಿಸಲಾಗಿತ್ತು.

ಈ ಕುರಿತ ಖಚಿತ ಮಾಹಿತಿ ಮೇರೆಗೆ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶೆ ಉಂಡಿ ಮಂಜುಳ ಶಿವಪ್ಪ ಗ್ರಾಮಕ್ಕೆ ಭೇಟಿ ನೀಡಿ, ಮಗು ಮತ್ತು ಬಾಣಂತಿಯನ್ನು ರಕ್ಷಣೆ ಮಾಡಿದ್ದಾರೆ. ಮಗುವನ್ನ ತಾವೇ ಕೈಗೆತ್ತಿಕೊಂಡು ಮನೆಗೆ ಕರೆತಂದಿದ್ದಾರೆ.

ಇದೇ ವೇಳೆ ಈ ಘಟನೆ ಮತ್ತೆ ಮರುಕಳಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಸದ್ಯ ಮನೆಯೊಳಗೆ ಮಗು ಮತ್ತು ಬಾಣಂತಿ ಸುರಕ್ಷಿತವಾಗಿದ್ದಾರೆ.

ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.