ಮನೆ ಸುದ್ದಿ ಜಾಲ ಕಾರ್ಖಾನೆಯಲ್ಲಿ ಗೋಡೆ ಕುಸಿದು ದುರಂತ: 9 ಮೃತದೇಹ ಪತ್ತೆ

ಕಾರ್ಖಾನೆಯಲ್ಲಿ ಗೋಡೆ ಕುಸಿದು ದುರಂತ: 9 ಮೃತದೇಹ ಪತ್ತೆ

0

ಮೊರಬಿ(ಗುಜರಾತ್): ಸಾಗರ್ ಸಾಲ್ಟ್ ಎಂಬ ಕಾರ್ಖಾನೆಯಲ್ಲಿ ಗೋಡೆ ಕುಸಿದು, ಅನೇಕ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್​ನ ಮೊರಬಿ ಜಿಲ್ಲೆಯ ಹಳವಾಡದಲ್ಲಿ ನಡೆದಿದೆ.

ದುರಂತದಲ್ಲಿ ಈಗಾಗಲೇ 9 ಮಂದಿ ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಹಳವಾಡ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸುದ್ದಿ ತಿಳಿದಾಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹಳವಾಡ ಜಿಐಡಿಸಿಗೆ ತಲುಪಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಇನ್ನೂ ಹೆಚ್ಚು ಮಂದಿ ಸಿಲುಕಿರುವುದರಿಂದ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.ಮಧ್ಯಾಹ್ನ 12 ಗಂಟೆ ಸುಮಾರಿಗೆ ಗೋಡೆ ಕುಸಿದಿದ್ದು, ಉಳಿದ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ದೌಡಾಯಿಸಿದರು. ಉಪ್ಪಿನ ಕಾರ್ಖಾನೆಯ ಗೋಡೆ ಏಕಾಏಕಿ ಕುಸಿದಿರುವುದಕ್ಕೆ ಕಾರಣ ತಿಳಿದುಬಂದಿಲ್ಲ. ಮಾಹಿತಿ ತಿಳಿದ ಬಳಿಕ ಗುಜರಾತ್ ಕಾಂಗ್ರೆಸ್ ಶಾಸಕ ಪುರುಷೋತ್ತಮ ಸವಾರಿಯಾ ಸ್ಥಳಕ್ಕೆ ಧಾವಿಸಿದ್ದು, ಘಟನೆ ಬಗ್ಗೆ ಪರಿಶೀಲನೆ ನಡೆಸಿದರು.

ಹಿಂದಿನ ಲೇಖನನಾಳೆ ಮಧ್ಯಾಹ್ನ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ
ಮುಂದಿನ ಲೇಖನತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ: ರಾಜ್ಯದ ಜನತೆಗೆ ಮಾಡಿರುವ ಅವಮಾನ ಎಂದ ಸಿದ್ದರಾಮಯ್ಯ