ಮೈಸೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹೊಸದಾಗಿ ಆಯ್ಕೆಯಾಗಿರುವ ಕಾನೂನು ಸ್ವಯಂಸೇವಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕೋರ್ಟ್ ಕಾಂಪ್ಲೆಕ್ಸ್ನ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಭಾವತಿ ಎಂ ಹಿರೇಮಠ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ಮಹದೇವಸ್ವಾಮಿಯವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ ಜಿ, ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ಅಡ್ವಕೇಟ್‌ಗಳಾದ ಎನ್ ಸುಂದರರಾಜ್ ಹಾಗೂ ಬಿ.ಎಂ ಮಾರಪ್ಪ ಅವರು ಭಾಗವಹಿಸಿದ್ದರು.















