ಬೆಂಗಳೂರು(Bengaluru): ರಾಜ್ಯದ ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ 13 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಾಸನದ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕವಿತಾ ರಾಜಾರಾಂ ಅವರನ್ನು ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿಯಾದ ಆರ್ . ಲೋಕನಾಥ್ ಅವರ ಜಾಗಕ್ಕೆ ನೇಮಿಸಲಾಗಿದೆ.