ಮನೆ ಕಾನೂನು ರಾಜ್ಯದ 21 ಐಎಎಸ್ ಅಧಿಕಾರಿಗಳ ವರ್ಗಾವಣೆ: ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್​ ರೆಡ್ಡಿ ಜಿ ಇಂದು...

ರಾಜ್ಯದ 21 ಐಎಎಸ್ ಅಧಿಕಾರಿಗಳ ವರ್ಗಾವಣೆ: ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್​ ರೆಡ್ಡಿ ಜಿ ಇಂದು ಅಧಿಕಾರ ಸ್ವೀಕಾರ

0

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕ ಸರ್ಕಾರ ಆಡಳಿತ ವರ್ಗದಲ್ಲಿ ಮೇಜರ್​ ಸರ್ಜರಿ ಮಾಡುತ್ತಿದೆ. ರಾಜ್ಯದ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Join Our Whatsapp Group

ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ  ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.  ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್​ ರೆಡ್ಡಿ ಜಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮಿಕಾಂತ್ ಅವರು ಈ ಹಿಂದೆ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು.

ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ.ರಾಮ್ ಪ್ರಸಾದ್ ಮನೋಹರ್ ವಿ ಅವರನ್ನು ನಗರಾಭಿವೃದ್ಧಿ ಇಲಾಖೆ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ನಿರ್ದೇಶಕ ಸ್ಥಾನಕ್ಕೆ,

ಬೆಂಗಳೂರು ಖಜಾನೆ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್  ಅವರನ್ನು ಪಂಚಾಯತ್ ರಾಜ್ ಆಯುಕ್ತರಾಗಿ,

ಬೆಂಗಳೂರು ಜವಳಿ ಅಭಿವೃದ್ಧಿ ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರು,  ಆಯುಕ್ತರಾಗಿ ಜ್ಯೋತಿ ಕೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾಮಾಜಿಕ ಲೆಕ್ಕ ಪರಿಶೋಧನೆ ನಿರ್ದೇಶಕರಾಗಿ ಶ್ರೀಧರ ಸಿ. ಎನ್

ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಎಲ್ ಅವರನ್ನು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ(ಜಾರಿ)ರನ್ನಾಗಿ,

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ನಿರ್ದೇಶಕರಾದ ವಿಜಯಮಹಂತೇಶ್ ವಿ ದಾನಮ್ಮನವರ್  ಅವರನ್ನು ಹಾವೇರಿ ಜಿಲ್ಲಾಧಿಕಾರಿಯಾಗಿ,

ಬೀದರ್ ಜಿಲ್ಲಾಧಿಕಾರಿಯಾದ ಗೋವಿಂದ ರೆಡ್ಡಿ ಅವರನ್ನು ಗದಗ್ ಜಿಲ್ಲಾಧಿಕಾರಿಯಾಗಿ,

ಹಾವೇರಿ ಜಿಲ್ಲಾಧಿಕಾರಿಯಾದ ರಘುನಂದನ್ ಮೂರ್ತಿ ಅವರನ್ನು ಬೆಂಗಳೂರಿನ ಖಜಾನೆ ಆಯುಕ್ತರನ್ನಾಗಿ,

ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕರಾದ ಡಾ.ಗಂಗಾಧರಸ್ವಾಮಿ ಜಿ.ಎಂ ಅವರನ್ನು ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ,

ಹಣಕಾಸು ಇಲಾಖೆಯ (ಬಜೆಟ್ ಮತ್ತು ಸಂಪನ್ಮೂಲಗಳು), ಸರ್ಕಾರದ ಜಂಟಿ ಕಾರ್ಯದರ್ಶಿಯಾದ ನಿತೀಶ್ ಅವರನ್ನು ರಾಯಚೂರು ಜಿಲ್ಲಾಧಿಕಾರಿಯಾಗಿ,

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಹೆಸ್ಕಾಂ)  ವ್ಯವಸ್ಥಾಪಕ ನಿರ್ದೇಶಕರಾದ ಮಹಮ್ಮದ್ ರೋಶನ್ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ,

ಬೆಂಗಳೂರು ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಶಿಲ್ಪಾ ಶರ್ಮ ಅವರನ್ನು ಬೀದರ್ ಜಿಲ್ಲಾಧಿಕಾರಿಯಾಗಿ,

ಬೆಂಗಳೂರು ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ (EDCS), ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ನಿರ್ದೇಶಕರಾದ ಡಾ. ದಿಲೇಶ್ ಸಸಿ ಅವರನ್ನು, ಬೆಂಗಳೂರು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ,

ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ಬೆಂಗಳೂರು ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ,

ಬೆಂಗಳೂರಿನ ಕರ್ನಾಟಕ ರಾಜ್ಯ ರೇಷ್ಮೆ ಕೃಷಿ ಸಂಶೋಧನಾ ಅಭಿವೃದ್ಧಿ ಸಂಸ್ಥೆ ನಿರ್ದೇಶಕರಾದ ಶ್ರೀರೂಪಾ ಅವರನ್ನು ಬೆಂಗಳೂರು ಪಶು ಇಲಾಖೆ ಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಆಯುಕ್ತರಾಗಿ,

ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತರು (ಆಡಳಿತ) ಗಿಟ್ಟೆ ಮಾಧವ್ ವಿಠಲ್ ರಾವ್ ಅವರನ್ನು ಬಾಗಲಕೋಟೆ (ಪುನರ್ವಸತಿ ಮತ್ತು ಪುನರ್ವಸತಿ)  ಪ್ರಧಾನ ವ್ಯವಸ್ಥಾಪಕರಾಗಿ,

ಬಳ್ಳಾರಿ ಉಪ ವಿಭಾಗ ಹಿರಿಯ ಸಹಾಯಕ ಆಯುಕ್ತರಾದ ಹೇಮಂತ್ ಎನ್ ಅವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ವಿಜಯನಗರ ಜಿಲ್ಲೆ ಹೊಸಪೇಟೆ ಉಪವಿಭಾಗ ಹಿರಿಯ ಸಹಾಯಕ ಆಯುಕ್ತರಾದ ನಾಂಗ್‌ಜೈ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರನ್ನು ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾವಣೆ ಮಡಲಾಗಿದೆ.

ಹಿಂದಿನ ಲೇಖನಹಾಸ್ಯ
ಮುಂದಿನ ಲೇಖನನ್ಯಾಯಾಲಯಗಳಲ್ಲಿ ಆರೋಪಿ, ಸಾಕ್ಷಿ ಹೆಸರು ಕರೆಯುವ ಪದ್ಧತಿ ಬದಲು