ಮನೆ ಕಾನೂನು 33 ಡಿವೈಎಸ್ಪಿ, 132 ಇನ್ಸ್ ಪೆಕ್ಟರ್ ಗಳ ವರ್ಗಾವಣೆ

33 ಡಿವೈಎಸ್ಪಿ, 132 ಇನ್ಸ್ ಪೆಕ್ಟರ್ ಗಳ ವರ್ಗಾವಣೆ

0

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡಿದ್ದು, ಓರ್ವ ಡಿವೈಎಸ್ ಪಿ ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್​ ಗಳನ್ನು ವರ್ಗಾವಣೆ ಮಾಡಿದೆ.

ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಯು.ಡಿ.ಕೃಷ್ಣಕುಮಾರ್-ಡಿವೈಎಸ್ ​ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ಎಸಿಪಿ, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ- ಎಸಿಪಿ, ಡಿಸಿಆರ್ ​ಇ, ಮೈಸೂರು ಸೇರಿದಂತೆ ಒಟ್ಟು 33 ಡಿವೈಎಸ್ ಪಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಂಪಂಗಿರಾಮನಗರ ಪೊಲೀಸ್​ ಠಾಣೆ ಇನ್ಸ್ ​ಪೆಕ್ಟರ್ ರವಿಕಿರಣ್, ರಾಮನಗರ ಕುಂಬಳಗೋಡು ಠಾಣೆ ಇನ್ಸ್​​ಪೆಕ್ಟರ್ ಮಂಜುನಾಥ್ ಜಿ ಹೂಗಾರ್. ಕಾಟನ್ ​ಪೇಟೆ ಪೊಲೀಸ್ ಠಾಣೆ ಇನ್ಸ್​ ಪೆಕ್ಟರ್ ನರೇಂದ್ರ ಬಾಬು, ಸಿಸಿಬಿ ಬೆಂಗಳೂರು ಇನ್ಸ್ ​ಪೆಕ್ಟರ್ ಕೆ.ಲಕ್ಷ್ಮೀ ನಾರಾಯಣ್, ಹಲಸೂರು ಪೊಲೀಸ್ ಠಾಣೆ ಇನ್ಸ್​ ಪೆಕ್ಟರ್ ಸಂತೋಷ್ ಕೆ, ಜಯನಗರ ಪೊಲೀಸ್ ಠಾಣೆ ಇನ್ಸ್​ ಪೆಕ್ಟರ್ ದೀಪಕ್ ಆರ್ ಸೇರಿ ಒಟ್ಟು 132 ಇನ್ಸ್ ​ಪೆಕ್ಟರ್ ​ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.