ಮಂಗಳೂರು(Mangalore): ಬಿಜೆಪಿ ಕಾರ್ಯಕರ್ತ ಪ್ರವೀಣ್ ಅಂತಿಮಯಾತ್ರೆಯ ಮೆರವಣಿಗೆ ವೇಳೆಯಲ್ಲಿ ಲಾಠಿಚಾರ್ಜ್ ಮಾಡಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ಅವರು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪಿಎಸ್ ಐ ಅಧಿಕಾರಿಗಳನ್ನು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಬೆಳ್ಳಾರೆಗೆ ನೂತನ ಪಿಎಸ್ ಐ ಆಗಿ ಸುಹಾಸ್ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ಟಿ.ಮಂಜುನಾಥ್ ನೇಮಕ ಮಾಡಲಾಗಿದೆ. ವರ್ಗಾವಣೆಯಾದ ಪಿಎಸ್ ಐ ಅಧಿಕಾರಿಗಳಿಗೆ ಜಾಗ ತೋರಿಸದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ಮಾಡಲು ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.