ಡ್ರೈವಿಂಗ್ ಲೈಸೆನ್ಸ್ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ಪ್ರಕಟಿಸಿದ್ದು, ಲಘು ಮೋಟಾರು ವಾಹನ ಚಾಲನೆ ಪರವಾನಗಿ ಹೊಂದಿರುವವರು ಸಾರಿಗೆ ವಾಹನ ಚಾಲನೆ ಮಾಡಬಹುದು ಎಂದು ಹೇಳಿದೆ.
ಸಾರಿಗೆ ವಾಹನಗಳನ್ನು ಚಾಲನೆ ಮಾಡಲು ಪ್ರತ್ಯೇಕ ಲೈಸೆನ್ಸ್ ಅಗತ್ಯವಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ.
ಸರಕು ಸಾಗಣೆ ವಾಹನ ಚಾಲನೆ ಪರವಾನಗಿ ಪಡೆದುಕೊಂಡೇ ಸಾರಿಗೆ ವಾಹನ ಚಾಲನೆ ಮಾಡಬೇಕೆಂದು ಓರಿಯಂಟಲ್ ಇನ್ಸೂರೆನ್ಸ್ ಕಂಪನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಹಂಚೇಟಿ ಸಂಜೀವಕುಮಾರ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.