ಮನೆ Uncategorized ಕಾರಿಗೆ ಟ್ರಕ್ ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಐವರು ಸಾವು

ಕಾರಿಗೆ ಟ್ರಕ್ ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಐವರು ಸಾವು

0

ತೆಲಂಗಾಣ: ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದು,  ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎರಡು ಕುಟುಂಬಗಳಿಗೆ ಸೇರಿದ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾರ್ಕೆಟ್‌ಪಲ್ಲಿ-ಅದ್ದಂಕಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ಗೊಂಡ ಜಿಲ್ಲೆಯ ಮಿರ್ಯಾಲಗುಡಾದ ಚೆರುಪಳ್ಳಿ ಮಹೇಶ್ (32), ಅವರ ಪತ್ನಿ ಜ್ಯೋತಿ (30), ಪುತ್ರಿ ರಿಷಿತಾ (6), ಯಾದಾದ್ರಿ ಭುವನಗಿರಿ ಜಿಲ್ಲೆಯ ಗೊಳ್ನೆಪಲ್ಲಿಯ ಭೂಮಾ ಮಹೇಂದರ್ (32) ಮತ್ತು ಅವರ ಮಗ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಪಘಾತದ ಸಮಯದಲ್ಲಿ ಸಂತ್ರಸ್ತರು ದೇವಸ್ಥಾನದಿಂದ ಮನೆಗೆ ಹಿಂದಿರುಗುತ್ತಿದ್ದರು ಎಂದು ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟ ಭೂಮಾ ಮಹೇಂದರ್ ಅವರ ಪತ್ನಿ ಭೂಮಾ ಮಾಧವಿ ಗಂಭೀರ ಗಾಯಗೊಂಡಿದ್ದಾರೆ. ಮಿರ್ಯಾಲಗುಡ ಪ್ರಾದೇಶಿಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ನಂತರ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪರಾರಿಯಾಗಿದ್ದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರಿಗೆ ಡಿಕ್ಕಿ ಹೊಡೆದ ಟ್ರಕ್ ನಿಲ್ಲಿಸದೆ ವೇಗವಾಗಿ ಹೋದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನರಾಷ್ಟ್ರಪತಿಗಳನ್ನು ವಿವೇಚನೆ ಇಲ್ಲದೆ ಏಕವಚನದಲ್ಲಿ ಸಂಬೋಧಿಸಿ, ಈಗ ವಿಷಾದ ವ್ಯಕ್ತಪಡಿಸಿದರೆ ಸಾಕೇ?: ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ
ಮುಂದಿನ ಲೇಖನಫೆಬ್ರವರಿ 9ರಂದು ‘ಜಸ್ಟ್‌ ಪಾಸ್‌’ ಚಿತ್ರ ಬಿಡುಗಡೆ