ಮನೆ ಅಪರಾಧ ನಿಂತಿದ್ದ ಬಸ್’ಗಳಿಗೆ ಟ್ರಕ್ ಡಿಕ್ಕಿ: 14 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ನಿಂತಿದ್ದ ಬಸ್’ಗಳಿಗೆ ಟ್ರಕ್ ಡಿಕ್ಕಿ: 14 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

0

ಸಿಧಿ, ಮಧ್ಯಪ್ರದೇಶ: ಮೊಹಾನಿಯಾ ಸುರಂಗದ ಬಳಿ ನಿಂತಿದ್ದ ಬಸ್​ಗಳಿಗೆ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ, 14 ಜನರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಗೆ ತೆರಳಿದ್ದ ಬಸ್’ಗಳು ವಾಪಸ್ ಆಗುತ್ತಿದ್ದವು. ಈ ವೇಳೆ, ಬಸ್​ ಚಾಲಕರು ಸುರಂಗ ಮಾರ್ಗದ ಬಳಿ ಬಸ್​’ಗಳನ್ನು ನಿಲ್ಲಿಸಿದ್ದಾರೆ. ಆಗ ಎದುರಿನಿಂದ ವೇಗವಾಗಿ ಬರುತ್ತಿದ್ದ ಟ್ರಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್​’ವೊಂದು ಪಲ್ಟಿಯಾಗಿದ್ದು, ಉಳಿದ ಬಸ್’​ಗಳು ಜಖಂಗೊಂಡಿದ್ದವು. ಈ ಭೀಕರ ಅಪಘಾತದಲ್ಲಿ 14 ಜನ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದರಲ್ಲಿ 5 ಮಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಗಾಯಾಳುಗಳನ್ನು ರೇವಾದ ಸಂಜಯ್ ಗಾಂಧಿ ಆಸ್ಪತ್ರೆ ಮತ್ತು ಸಿಧಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಎಂ ಶಿವರಾಜ್ ಸಿಂಗ್​ ಚೌಹಾಣ್​ ಸಂತಾಪ: ಅಪಘಾತದ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿದ್ದಿಯಲ್ಲಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದ ಬಗ್ಗೆ ಅತ್ಯಂತ ದುಃಖದ ಸುದ್ದಿ ಬಂದಿದೆ. ದೇವರು ಅಗಲಿದ ಆತ್ಮಗಳಿಗೆ ಅವರ ಪುಣ್ಯ ಪಾದದಲ್ಲಿ ಸ್ಥಾನ ನೀಡಲಿ ಮತ್ತು ಕುಟುಂಬ ಸದಸ್ಯರಿಗೆ ಈ ಆಳವಾದ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಪರಿಹಾರ ಘೋಷಣೆ: ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಹಾಗೂ ಸಾಮಾನ್ಯ ಗಾಯಾಳುಗಳಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ.