ಮನೆ ಅಪರಾಧ ಟ್ರಕ್, ಸರ್ಕಾರಿ ಬಸ್ – ಕಾರು ನಡುವೆ ಅಪಘಾತ: ಆರು ಮಂದಿ ಸಾವು

ಟ್ರಕ್, ಸರ್ಕಾರಿ ಬಸ್ – ಕಾರು ನಡುವೆ ಅಪಘಾತ: ಆರು ಮಂದಿ ಸಾವು

0

ಪುಣೆ: ಜಿಲ್ಲೆಯ ಅಹ್ಮದ್‌ ನಗರ-ಕಲ್ಯಾಣ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಟ್ರಕ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ.

ಮುಂಜಾನೆ 2.30ಕ್ಕೆ ಅಪಘಾತ ನಡೆದಿದ್ದು, ಆರು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಐವರನ್ನು ಪಾರ್ನರ್ ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೆ, ಒಬ್ಬರನ್ನು ಅಹ್ಮದ್‌ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ತಲುಪಿಸಲು ಸಹಾಯ ಮಾಡಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಹಿಂದಿನ ಲೇಖನಪಡಿತರ ಹಗರಣ: ಟಿಎಂಸಿ ನಾಯಕ ಶಹಜಹಾನ್ ಶೇಖ್ ಮನೆ ಮೇಲೆ ಇಡಿ ದಾಳಿ
ಮುಂದಿನ ಲೇಖನಅಕ್ರಮ ಗೋಸಾಗಣೆ: ವಾಹನ ಸಮೇತ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು