ರಾಮನಗರ: ಪಂಚರತ್ನ ಯೋಜನೆಗಳು ರಾಜ್ಯದ ಜನರಿಗೆ ಇಷ್ಟವಾಗಿಲ್ಲ ಅನ್ಸುತ್ತೆ. ಕಾಂಗ್ರೆಸ್ ನ ಗ್ಯಾರಂಟಿಗಳನ್ನು ನಂಬಿ ರಾಜ್ಯದ ಜನ ಮತ ಹಾಕಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಮೈಸೂರು ಭಾಗದಲ್ಲಿ ಜೆಡಿಎಸ್ ಗೆ ಹೀನಾಯ ಸೋಲು ವಿಚಾರವಾಗಿ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಹೆಚ್ ಡಿ ದೇವೇಗೌಡ 2 ಬಾರಿ ಸೋತ ಬಳಿಕವೂ ಜೆಡಿಎಸ್ ಅಧಿಕಾರಕ್ಕೆ ಬಂದಿತ್ತು. ಮುಂದಿನ ದಿನಗಳಲ್ಲಿ ಜನ ಮತ್ತೆ ಜೆಡಿಎಸ್ ಬೇಕು ಅಂತಾ ಬಯಸುತ್ತಾರೆ ಎಂದು ಹೇಳಿದರು.
ನಾನು ಕಳೆದ 6 ತಿಂಗಳಿಂದ ಶ್ರಮಪಟ್ಟು ಕೆಲಸ ಮಾಡಿದ್ದೆ. ಆದರೆ ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ. ಮುಂದಿನ ದಿನಗಳಲ್ಲಿ ನಾವು ಕಾರ್ಯಕರ್ತರ ಜೊತೆ ನಿಲ್ಲುತ್ತೇವೆ ಎಂದರು.
ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳು ಕೊಡುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ನೋಡೋಣ, ನಮಗಿಂತ ಅವರು ದೊಡ್ಡವರಲ್ವೆ. ಎಲ್ಲಾ ಲೆಕ್ಕಾಚಾರ ಮಾಡೇ ಸ್ಕೀಂ ಮಾಡಿರುತ್ತಾರೆ. ಮೊದಲು ಫ್ರೀ ಅಂತ ಹೇಳಿ ಈಗ ಕೆಲವೊಂದು ಷರತ್ತು ಹಾಕುತ್ತಿದ್ದಾರೆ. ನೋಡೊಣ ಮುಂದೆ ಏನ್ ಮಾಡುತ್ತಾರೆ ಎಂದು ಹೇಳಿದರು.
ಸಿಎಂ ಸ್ಥಾನ ಕೇಳಿದ್ದರಲ್ಲಿ ತಪ್ಪೇನು ಇಲ್ಲ
ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಒಕ್ಕಲಿಗ ಶ್ರೀಗಳ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಬೇಕು ಅಂತಾ ಹೇಳಿದ್ದಾರೆ. ಸಿಎಂ ಸ್ಥಾನ ಕೇಳಿದ್ದರಲ್ಲಿ ತಪ್ಪೇನು ಇಲ್ಲ. ಯಾರೇ ಸಿಎಂ ಆದರೂ ಒಂದು ಸಮುದಾಯದ ಸಿಎಂ ಆಗಬಾರದು. ಇಡೀ ರಾಜ್ಯದ ಜನರ ಸಮಸ್ಯೆಗಳನ್ನು ಬಗೆಹರಿಸುವ ಸಿಎಂ ಆಗಬೇಕು ಎಂದು ಹೇಳಿದರು.
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
ರಾಮ್ ಲಲ್ಲಾನಿಗೆ ನಡೆಯುತ್ತಿದೆ ಅಯೋಧ್ಯೆಯಲ್ಲಿ ಅಭಿಷೇಕ.
ಸ್ಯಾಂಡಲ್ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ…
ಬೋರ್ನ್ವಿಟಾ ಆರೋಗ್ಯಕ್ಕೆ ಹಾನಿಕಾರವೇ ?
BJP ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ ಮೋದಿ ಸರ್ಕಾರ…
ಭಾರತದಲ್ಲಿ ಏರಿಕೆಯಾದ ಶ್ರೀಮಂತರ ಸಂಖ್ಯೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.