ಮನೆ ಆರೋಗ್ಯ ತುಮಕೂರು: ಲಕ್ಕಮ್ಮ-ಕೆಂಪಮ್ಮ ಜಾತ್ರೆಯಲ್ಲಿ ಭಾಗಿಯಾಗಿದ್ದ 35 ಜನ ಅಸ್ವಸ್ಥ

ತುಮಕೂರು: ಲಕ್ಕಮ್ಮ-ಕೆಂಪಮ್ಮ ಜಾತ್ರೆಯಲ್ಲಿ ಭಾಗಿಯಾಗಿದ್ದ 35 ಜನ ಅಸ್ವಸ್ಥ

0

ತುಮಕೂರು: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿ ಗ್ರಾಮದ 35 ಜನ ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದು, ಎಂಟು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Our Whatsapp Group

ಉಳಿದವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಡಿಸ್ಚಾರ್ಜ್​ ಮಾಡಲಾಗಿದೆ.

300 ಮನೆಗಳಿರುವ ಗ್ರಾಮದಲ್ಲಿ 29 ವರ್ಷದ ಬಳಿಕ ಲಕ್ಕಮ್ಮ-ಕೆಂಪಮ್ಮ ಜಾತ್ರೆ ನಡೆಯುತ್ತಿದೆ. ಭಾನುವಾರದಿಂದ ಆರಂಭವಾದ ಜಾತ್ರೆ 6 ದಿನಗಳ ಕಾಲ ನಡೆಯುತ್ತದೆ. ಭಾನುವಾರ ರಾತ್ರಿ ದೇವರ ಕಾರ್ಯ ಮುಗಿಸಿದ ಬಳಿಕ ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದೆ.

ಇಬ್ಬರನ್ನು ತುಮಕೂರು ಜಿಲ್ಲಾಸ್ಪತ್ರೆ ಮತ್ತು ಉಳಿದವರನ್ನು ಮಧುಗಿರಿ ತಾಲ್ಲೂಕು ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಲಕ್ಷ್ಮಮ್ಮ ಮತ್ತು ಪೆದ್ದಣ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಕುಡಿಯುವ ನೀರಿನಿಂದಾಗಿ ವಾಂತಿ-ಬೇಧಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಚಿವ ಕೆ.ಎನ್ ರಾಜಣ್ಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ಜಾತ್ರೆ ಮಹೋತ್ಸವ ಇತ್ತು. ಮಳೆ ಕೂಡ ಹೆಚ್ಚಾಗಿದೆ. ಮಳೆ ನೀರಿನಿಂದಲೋ ಅಥವಾ ಊಟದಿಂದಲೋ ಕೆಲವರು ಅಸ್ವಸ್ಥರಾಗಿದ್ದಾರೆ. ಪೆದ್ದಣ್ಣ, ಲಕ್ಷ್ಮಮ್ಮ ಎನ್ನುವವರಿಗೆ ಗಂಭೀರವಾಗಿತ್ತು, ಈಗ ಚೇತರಿಕೆ ಆಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಹಿಂದಿನ ಲೇಖನರೇಣುಕಾ ಸ್ವಾಮಿ ಕೊಲೆ ಕೇಸ್ : ಪವಿತ್ರಾ ಗೌಡ ಎ 1, ದರ್ಶನ್ ಎ 2
ಮುಂದಿನ ಲೇಖನಸಂಗೀತ ಲೋಕದ ಧ್ರುವತಾರೆ ಪಂಡಿತ್ ರಾಜೀವ್ ತಾರಾನಾಥ್ ನಿಧನ