ತುಮಕೂರು: ನಿನ್ನೆ ಘಟಿಕೋತ್ಸವದಲ್ಲಿ ಪದವಿ ಪಡೆದ ವಿದ್ಯಾರ್ಥಿ ಇಂದು ಹಾವು ಕಡಿದು ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದಲ್ಲಿ ನಡೆದಿದೆ.
ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಮೃತ ದುರ್ದೈವಿ.
ನಿನ್ನೆ(ಬುಧವಾರ) ಡಾ. ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಅದಿತ್ ಬಾಲಕೃಷ್ಣನ್ ಎಂಬಿಬಿಎಸ್ ಪದವಿ ಪಡೆದಿದ್ದ.
ನಿನ್ನೆ ಪಾರ್ಕಿನಲ್ಲಿ ಹಾವು ಕಡಿದಿರುವ ಅನುಮಾನವಿದ್ದು, ಹಾವು ಕಡಿತ ಗಮನಿಸದೇ ಮನೆಗೆ ಬಂದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮೃತನ ಶವ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Saval TV on YouTube