ಮನೆ ರಾಷ್ಟ್ರೀಯ ತುಮಕೂರು ಅಪಘಾತ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ತುಮಕೂರು ಅಪಘಾತ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

0

ನವದೆಹಲಿ(New delhi): ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲೇನಹಳ್ಳಿ ಗೇಟ್ ಬಳ  ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ  ನರೇಂದ್ರ ಮೋದಿ ಮೃತಪಟ್ಟ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಪ್ರಧಾನಿ ಪರಿಹಾರ ನಿಧಿಯಿಂದ ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಘೋಷಿಸಿದ್ದಾರೆ.

ಇನ್ನು ಘಟನೆಯಿಂದ ಎಚ್ಚೆತ್ತ ಕಳ್ಳಂಬೆಳ್ಳ ಪೊಲೀಸರು ಬೆಂಗಳೂರಿಗೆ ತೆರಳುತ್ತಿರುವ ಕ್ರೂಸರ್ ಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದಾರೆ.