ಮನೆ ಅಪರಾಧ ತುಮಕೂರು ಬಸ್ ಅಪಘಾತ: ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ-  ಸಿಎಂ ಬೊಮ್ಮಾಯಿ

ತುಮಕೂರು ಬಸ್ ಅಪಘಾತ: ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ-  ಸಿಎಂ ಬೊಮ್ಮಾಯಿ

0

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಅಪಘಾತಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಲಾಗುವುದು. ತುಮಕೂರು ಬಸ್ ಅಪಘಾತ ಹೇಗಾಗಿದೆ, ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ತರಿಸಿಕೊಳ್ಳುತ್ತೇನೆ. ಎಲ್ಲ ವಿವರಗಳನ್ನು ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಶನಿವಾರ ಬೆಳಗ್ಗೆ 9.20 ಗಂಟೆ ಸುಮಾರಿಗೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ಸಿನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಆಗಿದೆ ಎಂದು ಪ್ರಾಥಮಿಕ ವರದಿಗಳು ಹೇಳುತ್ತಿವೆ.

ಹಿಂದಿನ ಲೇಖನಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ಕೊರೊನಾಗಿಂತಲೂ ಮಾರಕ: ತನ್ವೀರ್‌ ಸೇಠ್
ಮುಂದಿನ ಲೇಖನಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡಿದರೆ ಮಕ್ಕಳ ಹೊಟ್ಟೆ ತುಂಬುತ್ತದೆಯೇ ?: ಹೆಚ್ ಡಿಕೆ