ತುಮಕೂರು: ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ನಡೆದಿದೆ.
ಭೀಮಾಶಂಕರ್ (15), ಸಾವನ್ನಪ್ಪಿದ ವಿದ್ಯಾರ್ಥಿ.
ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಾಶಂಕರ್ ತುಮಕೂರು ತಾಲೂಕಿನ ಬೆಳದರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ.
ಚಿಕ್ಕತೊಟ್ಟಿಲು ಕೆರೆ ಬಳಿ ನಡೆಯುತ್ತಿದ್ದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದು, ರಿಲೇ ಆಟದಲ್ಲಿ ದ್ವೀತಿಯ ಸ್ಥಾನ ಪಡೆದಿದ್ದ.
ಕ್ರೀಡೆಯ ಬಹುಮಾನ ಪಡೆಯುವ ಮೊದಲೇ ಭೀಮಾಶಂಕರ್’ಗೆ ಹೃದಯಾಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಪ್ರಾಣಬಿಟ್ಟಿದ್ದಾನೆ.
ಸದ್ಯ ತುಮಕೂರಿನ ಶ್ರೀದೇವಿ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.