ಮನೆ ಸುದ್ದಿ ಜಾಲ ತುಮಕೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ  ̧ ಒಂದೇ ಕುಟುಂಬದ ಮೂವರು ಸಾವು

ತುಮಕೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ  ̧ ಒಂದೇ ಕುಟುಂಬದ ಮೂವರು ಸಾವು

0

ತುಮಕೂರು (ಜೂನ್​ 04): ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ  ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದ್ದಾಗಿದೆ.

ಈ ಪ್ರಕರಣ ಕುರಿತು ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯೂರಿನಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಓಮ್ನಿ ಕಾರುಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಓಮ್ನಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ವೃದ್ಧ ದಂಪತಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಘಟನಾ ​ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸದ್ಯ ಮೃತದೇಹಗಳನ್ನು ಹುಳಿಯಾರು ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.