ಮನೆ ಸುದ್ದಿ ಜಾಲ ತುಮಕೂರು: ಆಟವಾಡುತ್ತಿದ್ದಾಗ ವಿದ್ಯುತ್ ಹರಿದು ಇಬ್ಬರು ಮಕ್ಕಳ  ಸಾವು

ತುಮಕೂರು: ಆಟವಾಡುತ್ತಿದ್ದಾಗ ವಿದ್ಯುತ್ ಹರಿದು ಇಬ್ಬರು ಮಕ್ಕಳ  ಸಾವು

0

ತುಮಕೂರು: ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಯತೀಶ್ (14) ಹಾಗೂ ಪ್ರಜ್ವಲ್(14) ಮೃತಪಟ್ಟ ಬಾಲಕರು.

ಮನೆ ಮೇಲೆ ಆಟವಾಡುತ್ತಿದ್ದ ಇಬ್ಬರು ಬಾಲಕರು ಗುರುವಾರ ಮನೆಗೆ ಹೊಂದಿಕೊಂಡಂತೆ ಇದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಮುಟ್ಟಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಲಕರ ಸಾವಿಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಜೆಡಿಎಸ್ ಅಭ್ಯರ್ಥಿ ವೈಎಸ್‌’ವಿ ದತ್ತ ವಿರುದ್ಧ 41 ಚೆಕ್‌ ಬೌನ್ಸ್‌ ಪ್ರಕರಣ
ಮುಂದಿನ ಲೇಖನರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ: ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ