ತುಮಕೂರು: ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೊರಟಿದ್ದ ಭಕ್ತರಿಗೆ ಬಸ್ ಯಮಸ್ವರೂಪಿಯಾಗಿದ್ದು, ಎರಡು ಬಸ್ ನಡುವೆ ಸಿಲುಕಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತುಮಕೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ (60) ಪಂಕಜ (50) ಮೃತರು.
ಬಸ್ ರಿವರ್ಸ್ ತೆಗೆದುಕೊಳ್ಳುವಾಗ ಎರಡು ಬಸ್ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿರುವ ಅನುಮಾನ ವ್ಯಕ್ತವಾಗಿದೆ.
ಉಚಿತ ಬಸ್ ಪ್ರಯಾಣ ಹಿನ್ನೆಲೆ ಗೊರವನಹಳ್ಳಿ ದೇವಸ್ಥಾನಕ್ಕೆ ಏಳು ಜನ ಮಹಿಳೆಯರ ತಂಡ ಹೊರಟಿದ್ದು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.