ತುಮಕೂರು: ಗೋಕಟ್ಟೆಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.ಊರ್ಡಿಗೆರೆ ಹೋಬಳಿ ತಿಮ್ಮನಾಯಕನಹಳ್ಳಿ ಗ್ರಾಮದ ಸೌಂದರ್ಯ(26) ಮೃತ ಮಹಿಳೆ.ತಿಮ್ಮನಾಯಕನಹಳ್ಳಿಯ ತವರು ಮನೆಗೆ ಬಂದಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಗುರುವಾರ ಮಧ್ಯಾಹ್ನ ಬಟ್ಟೆತೊಳೆಯಲು ಗೋಕಟ್ಟೆಗೆ ಹೋಗಿದ್ದ ಸೌಂದರ್ಯ ಮನೆಗೆ ವಾಪಸ್ ಬಾರದೇ ಇದ್ದ ಕಾರಣ ಗಂಡನ ಮನೆಗೆ ಹೋಗಿರಬೇಕು ಎಂದು ಭಾವಿಸಿದ್ದರು. ಆದರೆ ಶುಕ್ರವಾರ ಬೆಳಿಗ್ಗೆ ಗ್ರಾಮಸ್ಥರು ಗೋಕಟ್ಟೆ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Saval TV on YouTube