ತುಮಕೂರು: ಜಿಲ್ಲಾ ಪಂಚಾಯಿತಿ ಎಇಇ, ಇಬ್ಬರು ಎಇಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳೂ ದಾಳಿ ಮಾಡಿದ್ದಾರೆ.
ಚಿಕ್ಕನಾಯಕನಹಳ್ಳಿ ಕಚೇರಿಯಲ್ಲಿ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗದ ಎಇಇ ಉಮಾಮಹೇಶ್, ಶಶಿಕುಮಾರ್ ಹಾಗೂ ಕಿರಣ್ ಕುಮಾರ್ ಬಲೆಗೆ ಬಿದ್ದಿದ್ದಾರೆ. ಜಲಜೀವನ್ ಮಿಷನ್ ಕಾಮಗಾರಿ ಬಿಲ್ ಮಂಜೂರಾತಿಗಾಗಿ ಗುತ್ತಿಗೆದಾರ ಚಿಕ್ಕೇಗೌಡ ಅನ್ನೋರಿದಂದ 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದರು. ಕಚೇರಿಯಲ್ಲಿ ಲಂಚ ಪಡೆವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಉಮಾಶಂಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.