ಮನೆ ಸುದ್ದಿ ಜಾಲ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕಾರ

ಬಿಬಿಎಂಪಿ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕಾರ

0

ಬೆಂಗಳೂರು(Bengaluru): ಬಿಬಿಎಂಪಿಯ ನೂತನ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಇಂದು ಅಧಿಕಾರ ಸ್ವೀಕರಿಸಿದರು.

ನಗರದ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಿಕಟ ಪೂರ್ವ ಮುಖ್ಯ ಆಯುಕ್ತ ಗೌರವ್ ಗುಪ್ತ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದ ತುಷಾರ್ ಗಿರಿನಾಥ್​​ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ನಿನ್ನೆಯಷ್ಟೇ ರಾಜ್ಯ ಸರ್ಕಾರ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರನ್ನು ವರ್ಗಾವಣೆ ಮಾಡಿತ್ತು. ಗೌರವ್‌ ಗುಪ್ತ ಬಿಬಿಎಂಪಿ ಆಡಳಿತಾಧಿಕಾರಿಯಾಗಿ 2020ರ ಸೆಪ್ಟೆಂಬರ್ 12ರಂದು ಅಧಿಕಾರ ಸ್ವೀಕರಿಸಿದ್ದರು. ನಂತರ 2021ರ ಏಪ್ರಿಲ್ 1ರಂದು ಬಿಬಿಎಂಪಿ ಮುಖ್ಯ ಆಯುಕ್ತ ಹುದ್ದೆಯ ಅಧಿಕಾರ ಸ್ವೀಕರಿಸಿದ್ದರು.

ಅಧಿಕಾರ ಸ್ವೀಕರಿಸಿದ ಬಳಿಕ ಪ್ರತಿಕ್ರಿಯಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಎದುರಿಗೆ ದೊಡ್ಡ ಸವಾಲಿದೆ. ಮುಂದೆ ಕೋವಿಡ್ 4ನೇ ಅಲೆ ಬರುತ್ತಿದೆ. ಜನರಿಗೆ ಒಳ್ಳೆಯ ಸೇವೆ ಕೊಡಬೇಕೆಂದು ಸಿದ್ಧವಾಗಿದ್ದೇವೆ ಎಂದರು.

ಹಿಂದಿನ ಆಯುಕ್ತರು ಒಳ್ಳೆ ರೀತಿ ಕೆಲಸ ಮಾಡಿದ್ದಾರೆ. ನಾವು ಕೂಡ ಅದೇ ರೀತಿ ಉತ್ತಮ ಕೆಲಸ ನಿರ್ವಹಿಸುತ್ತೇನೆ. ಮಳೆಗಾಲದಲ್ಲಿ ಪ್ರತಿವರ್ಷ ಕಷ್ಟವಾಗುತ್ತದೆ. ಈ ಸಮಸ್ಯೆಗೆ ತಕ್ಕಂತೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ನುಡಿದರು.

30 ವರ್ಷ ನಾನು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಆದರೆ, ಪ್ರತಿಯೊಂದು ಹುದ್ದೆಗೆ ತಮ್ಮದೇ ಆದ ಸವಾಲಿರುತ್ತದೆ. ಅದಕ್ಕೆಲ್ಲ ಹೆದರಿ ಕೂರುವುದಕ್ಕೆ ಆಗುವುದಿಲ್ಲ. ಕೆಲಸ ಮಾಡಲೇಬೇಕು ಎಂದು ಬಂದ ಮೇಲೆ ಕೆಲಸ ಮಾಡಲೇಬೇಕು. ಹೊಸ ಹುದ್ದೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ ಎಂದರು.