ಬೆಂಗಳೂರು(Bengaluru): ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಸರ್ಕಾರ ಶೇಕಡಾ 3.75 ರಷ್ಟು ಹೆಚ್ಚಳ ಮಾಡಿದೆ.
ಈ ಕುರಿತು ಮುಖ್ಯಮಂತ್ರಿಗಳ ಕಚೇರಿ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಜುಲೈ 2022ರ ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 3.75 ರಷ್ಟು ಹೆಚ್ಚಿಸಲು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದೆ.
ಈ ನಿರ್ಧಾರದಿಂದಾಗಿ ಸರ್ಕಾರದ ಮೇಲೆ ₹1,282.72 ಕೋಟಿ ಹೊರೆ ಬೀಳಲಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಮತ್ತು ಡಿಆರ್ ಅನ್ನು ಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ ಅನುಮೋದನೆ ನೀಡಿತ್ತು. ಅದರ ಬೆನ್ನಿಗೇ ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.