ಧಾರವಾಡ : ಧಾರವಾಡದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಧಾರವಾಡ ಉಪನಗರ ಠಾಣೆಯ ಸಿಬ್ಬಂದಿಯ ತಕ್ಷಣದ ಕಾರ್ಯಾಚರಣೆಯಿಂದ ಸುಮಾರು ₹3 ಲಕ್ಷ ಮೌಲ್ಯದ 5 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ನಗರದಲ್ಲಿ ಇತ್ತೀಚೆಗೆ ಬೈಕ್ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಎಸಿಪಿ ಪ್ರಶಾಂತ ಸಿದ್ದನಗೌಡರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚನೆಗೊಂಡಿತ್ತು. ಸಿಪಿಐ ದಯಾನಂದ ಶೇಗುಣಸಿ, ಪಿಎಸ್‌ಐ ರುದ್ರಪ್ಪ ಗುಡದರಿ ಹಾಗೂ ಸಿಬ್ಬಂದಿ ದಯಾನಂದ, ಮುಸ್ತಫಾ ಬೀಳಗಿ, ನಾಗರಾಜ ವಡ್ಡಪ್ಪಗೋಳ, ಪ್ರದೀಪ ಕುಂದಗೋಳ ಮತ್ತು ಹನುಮಂತ ಜಟ್ಟಣ್ಣವರ ಸೇರಿದಂತೆ ಹಲವು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದರು.
ಆರೋಪಿಗಳನ್ನು ಪತ್ತೆಹಚ್ಚಿ, ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರಿಂದ 5 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು.
ಎಸಿಪಿ ಪ್ರಶಾಂತ ಸಿದ್ದನಗೌಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಸಾರ್ವಜನಿಕರ ಸಹಕಾರದಿಂದಲೇ ಇಂತಹ ದುಷ್ಕೃತ್ಯಗಳನ್ನು ಕಡಿವಾಣ ಹಾಕಬಹುದು. ಇನ್ನು ಬಂಧಿತ ಖದೀಮರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ತನಿಖೆ ಮುಂದುವರೆದಿದೆ.