ಮನೆ ಸುದ್ದಿ ಜಾಲ ಹಾವೇರಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ವೃದ್ಧರ ದುರ್ಮರಣ!

ಹಾವೇರಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ವೃದ್ಧರ ದುರ್ಮರಣ!

0

ಹಾವೇರಿ: ಜಿಲ್ಲೆಯ ಎರಡು ಬೇರೆ ಬೇರೆ ಕಡೆಗಳಲ್ಲಿ ಸಂಭವಿಸಿದ ಸಿಡಿಲು ಬಡಿತದ ಪರಿಣಾಮ ಇಬ್ಬರು ವೃದ್ಧರು ಸಾವನ್ನಪ್ಪಿದ ಘಟನೆ ಜನರ ಮಧ್ಯೆ ಆಘಾತವನ್ನು ಮೂಡಿಸಿದೆ. ಹಾನಗಲ್ ಮತ್ತು ಹಿರೇಕೆರೂರು ತಾಲ್ಲೂಕುಗಳಲ್ಲಿ ಈ ದುರ್ಘಟನೆಗಳು ನಡೆದಿವೆ.

ಮೃತರು ಮರಿಯವ್ವ ನಾಯ್ಕರ್ (60) ಮೂಲತಃ ಗದಗ ಜಿಲ್ಲೆಯ ಬಸಾಪುರ ಗ್ರಾಮದ ನಿವಾಸಿ ಆಗಿದ್ದ ಮರಿಯವ್ವ ನಾಯ್ಕರ್ ಅವರು ಕಳೆದ ಕೆಲವು ತಿಂಗಳಿನಿಂದ ಹಾನಗಲ್ ತಾಲೂಕಿನ ಕೊಂಡೊಜಿ ಗ್ರಾಮದ ಮಾವಿನ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಸಿಡಿಲು ಬಡಿದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ದಾಖಲಾಗಿದೆ.

ಮೃತರು ನಾಗಪ್ಪ ಕನಸೋಗಿ (62) ಡಮ್ಮಳ್ಳಿ ಗ್ರಾಮದ ನಿವಾಸಿ ನಾಗಪ್ಪ ಕನಸೋಗಿ ಅವರು ಗ್ರಾಮದ ದೊಡ್ಡ ಕೆರೆಬಳಿ ಬಳಿ ದನಕಾಯಲು ಹೋಗಿದ್ದ ವೇಳೆ, ಆಕಾಶದಲ್ಲಿ ಮೂಡಿದ ಚುರುಕು ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಹಿರೇಕೆರೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾವೇರಿ ಜಿಲ್ಲೆಯ ಹಲವೆಡೆ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಇದ್ದು, ಸಹಜ ಜೀವನಕ್ಕೆ ತೊಂದರೆಯುಂಟಾಗಿದೆ. ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಸಿಡಿಲು ಪ್ರಾಣಹಾನಿಗೆ ಕಾರಣವಾಗುತ್ತಿರುವ ಘಟನೆಗಳು ಮತ್ತೊಮ್ಮೆ ಜಾಗೃತಿ ವಹಿಸಬೇಕಾದ ಅಗತ್ಯತೆಯನ್ನು ಓಲೈಸಿವೆ. ಜಿಲ್ಲೆಯ ಹಲವೆಡೆ ಬಿರುಗಾಳಿ ಸಮೇತ ಮಳೆಯಾಗಿದ್ದು, ಜಿಲ್ಲೆಯಲ್ಲಿ ಮಳೆರಾಯ ತಂಪೆರೆದಿದ್ದಾನೆ.