ಹಾಸನ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆಗಳ ದಾಳಿಗೆ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಕಡೆಗರ್ಜೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಯ್ಯ (60), ಚಿಕ್ಕಯ್ಯ (50) ಮೃತಪಟ್ಟವರು. ಏಕಾಏಕಿ ತೋಟಕ್ಕೆ ಆನೆಗಳು ನುಗ್ಗಿದ್ದು, ಸೊಂಡಲಿನಿಂದ ತಿವಿದು ಬಡಿದು, ಇಬ್ಬರನ್ನು ತುಳಿದು ಹಾಕಿದೆ. ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನೆ ನಡೆದ ಬಳಿಕ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆಯಲ್ಲಿ ಬೆಂಕಿ ಹಾಕಿ ರಸ್ತೆ ತಡೆ ಮಾಡಿದ್ದಾರೆ. ಸ್ಥಳಕ್ಕೆ ಶಾಸಕರು, ಡಿಎಫ್‌ಓ ಬರುವಂತೆ ಒತ್ತಾಯಿಸಿದ್ದಾರೆ.
ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕಾಡಾನೆ ದಾಳಿಗೆ ಇಬ್ಬರು ಬಲಿಯಾದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲಿ ಬೆಂಕಿ ಹಾಕಿ, ರಸ್ತೆ ತಡೆ ನಡೆಸಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಶಾಸಕರು, ಡಿಎಫ್‌ಓ ಬರುವಂತೆ ಜನರು ಒತ್ತಾಯ ಮಾಡುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಘಟನಾ ಸ್ಥಳಕ್ಕೆ ಹೆಚ್ಚಿನ ಪೊಲೀಸರು ಧಾವಿಸಿದ್ದಾರೆ.