ತುಮಕೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಬಳಿ ನಡೆದಿದೆ.
ಮೃತರನ್ನು ತಿಪಟೂರು ತಾಲ್ಲೂಕಿನ ಬಿದರೆಕೆರೆ ಗ್ರಾಮದ ನಿವಾಸಿಗಳಾದ ದಯಾನಂದ್ (25), ಯೋಗೇಶ್ (23) ಎಂದು ಗುರುತಿಸಲಾಗಿದೆ.
ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿರುವ ದಯಾನಂದ್ ಹಾಗೂ ಯೋಗೇಶ್ ಕೆಲಸ ಮುಗಿಸಿಕೊಂಡು ಬಿದರೆಕೆರೆ ಕಡೆಯಿಂದ ತುರುವೇಕೆರೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ತುರುವೇಕೆರೆ ಕಡೆಯಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಸವಾರರು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ನೊಣವಿನಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನುಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.