ಶಿರಾ: ತಾಲ್ಲೂಕಿನ ತರೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ತಡರಾತ್ರಿ ಕ್ರೂಸರ್ ವಾಹನ ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮೃತರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ತುಮಕೂರು ಕಡೆಯಿಂದ ಶಿರಾಗೆ ತೆರಳುತ್ತಿದ್ದ ಬೈಕ್‌ಗೆ ಹಿಂದಿನಿಂದ ಬಂದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಕ್ರೂಸರ್ ವಾಹನ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














