ಮನೆ ಹವಮಾನ ರಾಜ್ಯದಲ್ಲಿ ಇನ್ನೆರಡು ದಿನ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಇನ್ನೆರಡು ದಿನ ಮಳೆ: ಹವಾಮಾನ ಇಲಾಖೆ

0

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚುಮು ಚುಮು ಚಳಿಯ ಜೊತೆಗೆ ತುಂತುರು ಮಳೆ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಚೆನ್ನೈ, ಪುದುಚೇರಿ, ಆಂಧ್ರ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮಳೆಯ ಮುನ್ಸೂಚನೆ  ನೀಡಲಾಗಿದ್ದು ಈ ಭಾಗಗಳಲ್ಲಿ ಸಾಮಾನ್ಯದಿಂದ ಹಗುರ ಮಳೆ ಆಗಲಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಮುಂಜಾನೆಯಿಂದಲೇ ಕೆಲವು ಪ್ರದೇಶಗಳಲ್ಲಿ ಸೋನೆ ಮಳೆಯಾಗುತ್ತಿದ್ದು, ಇಡೀ ದಿನ ಚಳಿ ವಾತಾವರಣ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಸುಮಾರು 25 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲೂ  ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹಿಂದಿನ ಲೇಖನಬೆಂಗಳೂರು: ರೈಲ್ವೆ ಹಳಿ ಮೇಲೆ ಪ್ರೇಮಿಗಳ ಶವ ಪತ್ತೆ
ಮುಂದಿನ ಲೇಖನಆರ್’​ಟಿಐ ಆನ್‌’ಲೈನ್ ಪೋರ್ಟಲ್ ಪ್ರಾರಂಭಿಸಿದ ಸುಪ್ರೀಂ ಕೋರ್ಟ್