ಮನೆ ರಾಜ್ಯ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

0

ಬೆಂಗಳೂರು(Bengaluru): ನೈಋತ್ಯ ಮುಂಗಾರು ತುಸು ಚುರುಗೊಂಡಿದ್ದು, ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂ.26 ರವರೆಗೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಭಾಗದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.