ಚೆನ್ನೈ: ತಮಿಳುನಾಡಿನ ತಂಜಾವೂರು ಜಿಲ್ಲೆಯ ಬಾರ್’ವೊಂದರಲ್ಲಿ ಮದ್ಯ ಸೇವಿಸಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.
ಮೃತರನ್ನು ಮೀನುಗಾರ ಕುಪ್ಪಸಾಮಿ ಮತ್ತು ಚಾಲಕ ವಿವೇಕ್ ಎಂದು ಗುರುತಿಸಲಾಗಿದೆ.
ಇಬ್ಬರ ದೇಹದಿಂದ ಸಂಗ್ರಹಿಸಿದ ಮಾದರಿಗಳ ವಿಧಿವಿಜ್ಞಾನ ವಿಶ್ಲೇಷಣೆಯು ಸೈನೈಡ್ ಇರುವಿಕೆಯನ್ನು ದೃಢಪಡಿಸಿದೆ. ಸಾರಾಯಿಯಲ್ಲಿ ಮೆಥನಾಲ್ ಇರಲಿಲ್ಲ ಎಂದು ವರದಿಯಾಗಿದೆ. ಕೈಗಾರಿಕಾ ಉದ್ದೇಶಗಳಿಗಾಗಿ ಬಳಸುವ ಮೆಥನಾಲ್ ಆಲ್ಕೋಹಾಲ್ ವಾಸನೆಯನ್ನು ಹೊಂದಿರುತ್ತದೆ.
ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಂಜಾವೂರು ಜಿಲ್ಲಾಧಿಕಾರಿ ದಿನೇಶ್ ಪೊನ್ರಾಜ್ ಆಲಿವರ್ ಹೇಳಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಮೊದಲೇ ಬಾರ್ ನಲ್ಲಿ ಮದ್ಯವನ್ನು ಪೂರೈಸಲಾಗಿದೆ ಎಂದು ಆರೋಪಿಸಲಾಗಿದೆ.
ಬಾರ್ ನಲ್ಲಿನ ಸಿಸಿಟಿವಿ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ನಾವು ಪುರಾವೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ರಾವತ್ ತಿಳಿಸಿದ್ದಾರೆ.















