ಉಳ್ಳಾಲ: ಇಲ್ಲಿನ ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಶನಿವಾರ ನಡೆದಿದೆ.
ಸೋಮೇಶ್ವರ ಪರಿಜ್ಞಾನ ದ್ವಿತೀಯ ಪಿಯುಸಿ ಕಾಲೇಜಿನ ಯಶ್ವಿತ್ ಮತ್ತು ಯುವರಾಜ್ ಸಮುದ್ರಪಾಲಾದ ವಿದ್ಯಾರ್ಥಿಗಳು. ಇವರಿಬ್ಬರು ಮಂಜೇಶ್ವರದ ಕುಂಜತ್ತೂರು, ಅಡ್ಕ ನಿವಾಸಿಗಳು.
ಸಮುದ್ರ ತೀರದಲ್ಲಿ ಆಟವಾಡುವ ಸಂದರ್ಭ ಅಪ್ಪಳಿಸಿದ ಅಲೆಗಳ ನಡುವೆ ಇಬ್ಬರು ವಿದ್ಯಾರ್ಥಿಗಳು ಸಿಲುಕಿದ್ದಾರೆ. ಸ್ಥಳೀಯ ಈಜುಗಾರರು, ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಯುತ್ತಿದೆ.
ಸೋಮೇಶ್ವರ ಸಮುದ್ರತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಈಜಲು ತೆರಳದಂತೆ ಉಳ್ಳಾಲ ಠಾಣಾಧಿಕಾರಿ ಹೆಚ್. ಎನ್ ಬಾಲಕೃಷ್ಣ ಸೂಚನೆ ನೀಡಿದ್ದಾರೆ.
Saval TV on YouTube