ಮನೆ ಸುದ್ದಿ ಜಾಲ ಕೆಆರ್ ಎಸ್ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಕೆಆರ್ ಎಸ್ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

0

ಮೈಸೂರು: ಮೀನಾಕ್ಷಿಪುರದ ಕೆಆರ್‌ ಎಸ್ ಹಿನ್ನೀರು ಪ್ರದೇಶದಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

Join Our Whatsapp Group


ಹಾಸನ ಮೂಲದ ಚಿರಂತ್(22) ಬೀದ‌ರ್ ಮೂಲದ ಸುನಿಲ್ (22) ಮೃತ ವಿದ್ಯಾರ್ಥಿಗಳು. ಇಬ್ಬರು ವಿದ್ಯಾರ್ಥಿಗಳು ನಗರದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.
ಈ ನಡುವೆ ಇಬ್ಬರು ವಿದ್ಯಾರ್ಥಿಗಳು ಸ್ನೇಹಿತರ ಜೊತೆ ಬೈಕ್‌ ‌ನಲ್ಲಿ ಬಂದಿದ್ದರು. ಇಬ್ಬರೂ ಈಜಲು ನೀರಿಗೆ ಇಳಿದಿದ್ದರು. ಅರ್ಧಗಂಟೆ ಈಜಾಡಿದ ನಂತರ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ.

ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪ
ಮುಂದಿನ ಲೇಖನಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಕರಣ: ಮೇಲ್ಮನವಿ ಸಲ್ಲಿಸುವ ಅಗತ್ಯವಿಲ್ಲ ಎಂದ ಎಜಿ ಕಚೇರಿ