ಬೆಂಗಳೂರು: ಹೊಸಕೆರೆಹಳ್ಳಿಯ ನೈಸ್ ಟೋಲ್ ಬಳಿ ದ್ವಿಚಕ್ರ ವಾಹನದ ಟೈರ್ ಸ್ಫೋಟಗೊಂಡು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸುಲೋಚನ (24) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅರ್ಧ ಹೆಲ್ಮೆಟ್ ಧರಿಸಿದ್ದರಿಂದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿತ್ತು. ಮತ್ತೋರ್ವ ಸವಾರ ಆನಂದ್ ಎಂಬವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾಫ್ಟ್‌ವೇರ್ ಉದ್ಯೋಗಿಗಳಾಗಿದ್ದ ಸುಲೋಚನಾ ಹಾಗೂ ಆನಂದ್ ಕೆಲಸ ಮುಗಿಸಿ ನಿನ್ನೆ ಸಂಜೆ ಕೋರಮಂಗಲದಿಂದ ಮನೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ವಾಪಸಾಗುತ್ತಿದ್ದರು. ನೈಸ್ ರಸ್ತೆಯ ಟೋಲ್ ಬಳಿ ದ್ವಿಚಕ್ರ ವಾಹನದ ಹಿಂಬದಿ ಟೈರ್ ಸ್ಫೋಟಗೊಂಡಿದ್ದು ನಿಯಂತ್ರಣ ತಪ್ಪಿ ಇಬ್ಬರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸುಲೋಚನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube