ಮನೆ ಸುದ್ದಿ ಜಾಲ ಕಾಲುವೆಯಲ್ಲಿ ಬಿದ್ದು, ಇಬ್ಬರು ಮಹಿಳೆಯರು ಸಾವು..!

ಕಾಲುವೆಯಲ್ಲಿ ಬಿದ್ದು, ಇಬ್ಬರು ಮಹಿಳೆಯರು ಸಾವು..!

0

ರಾಯಚೂರು : ಕೈಕಾಲು ತೊಳೆದುಕೊಳ್ಳಲು ಹೋಗಿ ಕಾಲುವೆಯಲ್ಲಿ ಬಿದ್ದು, ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಆನೆ ಹೊಸೂರು ಬಳಿ ನಡೆದಿದೆ.

ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35) ಮತ್ತು ದೇವಮ್ಮ (30) ಮೃತರು. ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರೂ ಮೃತಪಟ್ಟಿದ್ದಾರೆ. ಗದ್ದೆಯಲ್ಲಿ ಭತ್ತ ಹಚ್ಚುವ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ಘಟನೆ ಸಂಭವಿಸಿದೆ.

ಕೂಲಿ ಕೆಲಸ ಮುಗಿಸಿ ಕೈಕಾಲು ತೊಳೆದುಕೊಂಡು ಮನೆಗೆ ಹೋಗಲು ಕಾಲುವೆ ಬಳಿ ಬಂದಿದ್ದರು. ಲಿಂಗಸುಗೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮಹಿಳೆಯರ ಶವ ಹೊರತೆಗೆದಿದ್ದಾರೆ.

ಇಬ್ಬರು ಮಹಿಳೆಯರ ಮೃತದೇಹವನ್ನು ಲಿಂಗಸುಗೂರು ತಾಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಈ ಘಟನೆ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.