ಚಾಮರಾಜನಗರ: ಕುಡಿದ ಅಮಲಿನಲ್ಲಿ ಕೆರೆಗೆ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ತೆರಕಣಾಂಬಿ ಗ್ರಾಮದ ಕಾರ್ತೀಕ್ (30), ವಿನೋದ್ (26) ಮೃತ ಯುವಕರು.
ಕಳೆದ ರಾತ್ರಿ ಕುಡಿದ ಅಮಲಿನಲ್ಲಿ ಕೆರೆಯ ಬಳಿ ಮೂತ್ರ ವಿಸರ್ಜನೆ ಮಾಡಲು ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ಅರಿತ ಅಗ್ನಿಶಾಮಕ ದಳದ ಸಿಬ್ಬಂದಿ ಶವವನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಮೃತ ದೇಹಗಳನ್ನು ಚಾಮರಾಜನಗರದ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ.
Saval TV on YouTube