ಮನೆ ಅಪರಾಧ ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾವು

ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾವು

0

ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ತಾಲೂಕಿನ ಕಡತನಾಳ ಮತ್ತು ರಾಯಣ್ಣನ ಸಂಗೊಳ್ಳಿ ಮಾರ್ಗ ಮಧ್ಯದಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿ ಮೃತ ಪಟ್ಟ ಘಟನೆ ಮಂಗಳವಾರ ನಡೆದಿದೆ.

Join Our Whatsapp Group

ಮೃತ ದುರ್ದೈವಿಗಳು ಸವದತ್ತಿ ತಾಲೂಕಿನ ಹೊಸೂರ ಗ್ರಾಮದ ಸುರೇಶ ವಿಶ್ವನಾಥ ಹಳೆಮನಿ (28) ಹಾಗೂ ತಡಸಲೂರ ಗ್ರಾಮದ ಬಸವರಾಜ ನಾಗಪ್ಪ ಶಿಗ್ಗನವರ (27) ಎನ್ನುವವರಾಗಿದ್ದಾರೆ.

ಮೂವರು ಗೆಳೆಯರು ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆಂದು ಬಂದಿದ್ದರು. ಉತ್ಸವ ಮುಗಿದ ನಂತರ ಒಬ್ಬ ಗೆಳೆಯನನ್ನು ತುರಮರಿ ಗ್ರಾಮದಲ್ಲಿರುವ ಅವರ ಮನೆಗೆ ಬಿಟ್ಟು ಮರಳಿ ತಮ್ಮ ಸ್ವಗ್ರಾಮಕ್ಕೆ ಹೋಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಘಟನಾ ಸ್ಥಳಕ್ಕೆ ಚನ್ನಮ್ಮನ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೊಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಚನ್ನಮ್ಮನ ಕಿತ್ತೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.