ಮನೆ ಸುದ್ದಿ ಜಾಲ ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಜಲಸಮಾಧಿ..!

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಜಲಸಮಾಧಿ..!

0

ಮಂಡ್ಯ : ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು ಎಂದು ಗುರುತಿಸಲಾಗಿದೆ.

ಈ ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಮತ್ತೊಬ್ಬ ಸ್ನೇಹಿತ ವಿಕಾಸ್ ಜೊತೆಗೂಡಿ ಮೂವರು ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ನೀರಲ್ಲಿ ಮುಳಗಿರುವ ಬಗ್ಗೆ ವಿಕಾಸ್ ಸಮೀಪದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೂಲಕ ಕೆ.ಆರ್ ಸಾಗರ ಪೊಲೀಸ್ ಠಾಣೆ ಮಾಹಿತಿ ನೀಡಿದ್ದಾರೆ.

ವೃತ್ತ ನಿರೀಕ್ಷಕ ವಿವೇಕಾನಂದ, ಪಿಎಸ್‌ಐ ರಮೇಶ್ ಕರ್ಕಿಕಟ್ಟೆ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳಿಯ ನುರಿತ ಈಜುಗಾರರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾ ಚರಣೆ ನಡೆಸಿ ಮೋಹನ್ ಕುಮಾರ್, ರವಿಚಂದ್ರ ಶವ ಹೊರತೆಗೆಯಲಾಗಿದೆ. ಶವವನ್ನು ಮೈಸೂರು ಕೆ.ಆರ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.